ತುಮಕೂರು-ಶಾಸಕ ಸುರೇಶ್ ಗೌಡ-ಒಬ್ಬ ಫಲಾಯನವಾದಿ-ಆತನಿಗೆ ಸುಳ್ಳು-ಹೇಳುವುದೇ-ಕಾಯಕ-ಮಾಜಿ ಶಾಸಕ-ಡಿ.ಸಿ.ಗೌರಿಶಂಕರ್

ತುಮಕೂರು: ತುಮಕೂರು ಗ್ರಾಮಾಂತರ ಶಾಸಕರಾಗಿರುವ ಬಿ.ಸುರೇಶಗೌಡ ಓರ್ವ ಫಲಾಯನವಾದಿ ರಾಜಕಾರಣಿ. 2023 ರ ವಿಧಾನಸಭಾ ಚುನಾವಣೆಯ ವೇಳೆ ಮತದಾರರಿಗೆ ನೀಡಿದ ಒಂದು ಭರವಸೆಯನ್ನು ಈಡೇರಿಸಿಲ್ಲ.ನನ್ನ ಕಾಲದಲ್ಲಿ ಮಂಜೂರಾದ ಜೆ.ಜೆ.ಎಂ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡುತ್ತಿರುವುದು ಬಿಟ್ಟರೆ ಒಂದು ನೈಯಾ ಪೈಸೆ ಅನುದಾನ ತಂದಿಲ್ಲ.

ಕುಂಭಮೇಳಕ್ಕೆ ಹೋಗಿ ಪುಣ್ಯ ಸ್ಥಾನ ಮಾಡಿ ಬಂದ ಮೇಲಾದರೂ ಬದಲಾಗಿದ್ದಾರೆ ಎಂದುಕೊಂಡಿದ್ದೆ.ಅವರು ಮತ್ತೆ ಹಳೆಯ ಚಾಳಿಯನ್ನೇ ಮುಂದುವರೆಸಿದ್ದಾರೆ.ಅವರ ಹಳೆಯ ಚಾಳಿಯನ್ನು ಬಿಡುವಂತೆ ಮಾಡಲು ರಾಜ್ಯ ಸರಕಾರ ಟಿ.ನರಸೀಪುರ ತಾಲೂಕಿನ ತಿರುಮಕೂಡಲದಲ್ಲಿ ಹಮ್ಮಿಕೊಂಡಿರುವ ಕುಂಭ ಮೇಳಕ್ಕೆ ನಾನೇ ಕರೆದುಕೊಂಡು ಹೋಗುತ್ತೇನೆ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಎಂದು ಕುಟುಕಿದರು.

       ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌರಿಶಂಕರ್ ರವರು ಈ ವರ್ಷ ಗ್ರಾಮಾಂತರ ಕ್ಷೇತ್ರದಲ್ಲಿ ಎಷ್ಟು ಕೆರೆಗಳಿಗೆ ಹೇಮಾವತಿ ನೀರು ಹರಿದಿದೆ,ಎಷ್ಟು ಕೆರೆ ತುಂಬಿಸಿದ್ದೀರಿ,ಪಂಪ್ ಹೌಸ್ ನಲ್ಲಿರುವ ಮೋಟಾರುಗಳು ಕೆಟ್ಟು ನಿಂತಿವೆ,ಬೆಸ್ಕಾಂಗೆ ಬಿಲ್ ಕಟ್ಟಿಲ್ಲ ಅವುಗಳ ಕಡೆ ಗಮನ ಹರಿಸಿ ಶಾಸಕರೇ,ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ಆಗಲಿ, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರಾಗಲಿ ಒಳ್ಳೆಯ ಕೆಲಸ ಮಾಡುತಿದ್ದಾರೆ.

ಆದರೆ ಪದೇ ಪದೇ ಪರಮೇಶ್ವರ್ ಅವರನ್ನು ವಾಮಾಗೋಚರವಾಗಿ ಟೀಕಿಸುವ ಮೂಲಕ ಅವರ ತೇಜೋವಧೆಗೆ ಯತ್ನಿಸುತ್ತಿರುವುದು ಗ್ರಾಮಾಂತರ ಶಾಸಕರಿಗೆ ಶೋಭೆ ತರುವುದಿಲ್ಲ.150 ಕೋಟಿ ವೆಚ್ಚದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಎತ್ತಿನ ಹೊಳೆ ಯೋಜನೆಗೆ ೩೫೦ ಕೋಟಿ ರೂ ಹೆಚ್ಚುವರಿ ಅನುದಾನ ನೀಡಿದೆ.

ತುಮಕೂರು ನಗರಕ್ಕೆ 200 ಕೋಟಿ ರೂ ವಿಶೇಷ ಅನುದಾನ ನೀಡಲಾಗಿದೆ.ನೀವೇ ಗುದ್ದಲಿ ಪೂಜೆ ನೆರವೇರಿಸಿದ ಬೆಳ್ಳಾವಿ ಸರಕಾರಿ ಪ್ರಥಮ ದರ್ಜೆಕಾಲೇಜು ನಿರ್ಮಾಣಕ್ಕೆ 5 ಕೋಟಿ ಅನುದಾನ ನೀಡಿದ್ದು ಯಾರು,ಕೈದಾಳದ ಚನ್ನಕೇಶವ ದೇವಾಲಯವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ನೀಲನಕ್ಷೆ ತಯಾರಾಗಿದೆ.

ಇದರ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಿದ್ದಾರೆ ಎಂದ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್, ತುಮಕೂರು ಗ್ರಾಮಾಂತರದಲ್ಲಿ ಅಭಿವೃದ್ಧಿ ಎಂಬುದೇ ಸ್ತಬ್ದವಾಗಿದೆ.ಮೊದಲು ಕ್ಷೇತ್ರದ ಅಭಿವೃದ್ಧಿಯತ್ತ ಗಮನಹರಿಸಲಿ ಎಂದು ತಾಕೀತು ಮಾಡಿದರು.

       ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿಯೇ ಜಿಲ್ಲೆಯಲ್ಲಿ ಎರಡು ಬೃಹತ್ ಫಲಾನುಭವಿಗಳ ಸಮಾವೇಶ ನಡೆದಿದೆ.ಸುಮಾರು 1500 ಕೋಟ ರೂಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಮಾಡಲಾಗಿದೆ.ಆ ಸಮಾರಂಭಗಳಲ್ಲಿ ಸ್ವತಃ ಸುರೇಶ್ ಗೌಡರೇ ಮುಖ್ಯಮಂತ್ರಿಗಳ ಪಕ್ಕದಲ್ಲಿ ಕುಳಿತು ಸವಲತ್ತು ವಿತರಣೆ ಮಾಡಿದ್ದು ಮರೆತುಹೋಯಿತೇ? ಎಂದು ಪ್ರಶ್ನಿಸಿದರು.

       ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಬಗ್ಗೆ ತೀರ ಹಗುರವಾಗಿ ಮಾತನಾಡುವುದನ್ನೇ ಚಟವಾಗಿ ಮಾಡಿಕೊಂಡಿರುವ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಪ್ರಚಾರಕ್ಕಾಗಿ ಸರಕಾರವನ್ನು ಹಿಯಾಳಿಸುವುದನ್ನು ಕೈಬಿಡಬೇಕು ಎಂದು ತಾಕೀತು ಮಾಡಿದರು.

       ಜಿಲ್ಲೆಗೆ ಸರಕಾರದ 5 ಗ್ಯಾರಂಟಿ ಯೋಜನೆಗಳಿಗೆ ಸುಮಾರು 2500 ಕೋಟಿ ರೂಗಳ ಅನುದಾನ ನೀಡಲಾಗಿದೆ. ಮಹಾತ್ಮಗಾಂಧಿ ಕ್ರೀಡಾಂಗಣ,ದೇವರಾಜ ಅರಸು ಬಸ್ ನಿಲ್ದಾಣ ನಿರ್ಮಾಣಕ್ಕೆ ಸರಕಾರದಿಂದ ಹಣ ನೀಡಲಾಗಿದೆ. ಹಾಗಿದ್ದರೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಕೇವಲ ಸಿದ್ದಾರ್ಥ ಕಾಲೇಜಿಗೆ ಬಂದು ಹೋಗುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಹೇಳಿಕೆ ನೀಡುವ ಸುರೇಶಗೌಡರು, ಬೆಳಗಾದ ತಕ್ಷಣ,ಡಾ.ಜಿ.ಪರಮೇಶ್ವರ್ ಬೆಂಗಳೂರು ಮನೆಗೆ ಹೋಗಿ ಕುಳಿತಿರುತ್ತಾರೆ. ಈ ರೀತಿಯ ದ್ವಂಧ್ವ ಬಿಡಿ,ಪದೇ ಪದೇ ಈ ರೀತಿಯ ಅವಹೇಳನಕಾರಿ ಹೇಳಿಕೆಯನ್ನು ಕೈಬಿಡದಿದ್ದರೆ ನಾವು ಕೂಡ ನಿಮ್ಮಗೆ ಘೇರಾವ್ ಹಾಕುವ ಕಾಲ ದೂರವಿಲ್ಲ.ನಮ್ಮ ಕಾರ್ಯಕರ್ತರ ತಾಳ್ಮೆಗೂ ಮಿತಿ ಇದೆ ಎಂದು ಚಂದ್ರಶೇರಗೌಡ ನುಡಿದರು.

       ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ,ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿಯೇ ಸಾಕಷ್ಟು ಸಮಸ್ಯೆಗಳಿವೆ. ತುಮಕೂರು ವಿಶ್ವವಿದ್ಯಾಲಯಕ್ಕೆ ಸರಿಯಾಗಿ ಮೂಲಭೂತ ಸೌಕರ್ಯಗಳಿಲ್ಲ. ಕುಡಿಯುವ ನೀರಿನ ಸಮಸ್ಯೆ ಇದೆ.ಹೈನುಗಾರರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ತುಮಕೂರು ಜಿಲ್ಲಾ ಪಂಚಾಯತ್ ಗೆ ಮತ್ತು ಕಂದಾಯ ಇಲಾಖೆಗೆ ಎರಡು ಪ್ರಶಸ್ತಿಗಳು ಬಂದಿವೆ. ಪ್ರಚಾರದ ಹುಚ್ಚಿಗೆ ಬಿದ್ದ ಅಸಂಬದ್ದ ಹೇಳಿಕೆ ನೀಡುವುದನ್ನು ಕೈಬಿಡಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರ ಮೇಲಿನ ನಿಮ್ಮ ರೋಷವೇಷ ಕಡಿಮೆಯಾಗಲು ಕಾರಣ ಎಂಬುದನ್ನು ಜನತೆಯ ಮುಂದಿಡಿ ಎಂದರು.

       ಈ ವೇಳೆ ಜಿಲ್ಲಾ ಕಾಂಗ್ರೆಸ್ ಹಿರಿಯ ಮುಖಂಡರು ಮತ್ತು ಕಾಂಗ್ರೆಸ್ ನಗರ ವಿಧಾನಸಭಾ ಪರಾಜಿತ ಅಭ್ಯರ್ಥಿ ಇಕ್ಬಾಲ್ ಅಹಮದ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಂ.ಮಹೇಶ್,ಜಿಲ್ಲಾ ವಕ್ತಾರ ಕೆ.ಎಂ.ಸುಜಾತ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

× How can I help you?