ತುಮಕೂರು- ನವಶಕ್ತಿ-ವೈಭವ-ಧಾರ್ಮಿಕ-ಕಾರ್ಯಕ್ರಮ

ತುಮಕೂರು- ವಾಸವಿ ಯುವಜನ ಸಂಘದ ವತಿಯಿಂದ ನವಶಕ್ತಿ ವೈಭವ ಎಂಬ ಧಾರ್ಮಿಕ ಕಾರ್ಯಕ್ರಮವನ್ನು ನಗರದ ಅಮಾನಿಕೆರೆಯಲ್ಲಿರುವ ಗಾಜಿನ ಮನೆಯಲ್ಲಿ ಮಾ. 2 ರಂದು ನಡೆಯಲಿದೆ.


ಈ ಧಾರ್ಮಿಕ ಕಾರ್ಯಕ್ರಮಕ್ಕೆ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಜನರು ಆಗಮಿಸುವ ನಿರೀಕ್ಷೆಯಿದ್ದು, ಬೆಳಿಗ್ಗೆ 9 ಗಂಟೆಯಿಂದ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ಮಧ್ಯಾಹ್ನ 10.30ಕ್ಕೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ದಾಸೋಹ ಏರ್ಪಡಿಸಲಾಗಿದೆ.


ಅಂದು ಸಂಜೆ ೫ ಗಂಟೆಗೆ ನಮ್ಮ ಬ್ಯಾಂಕ್‌ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರುಗಳಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಕಾರ್ಯದರ್ಶಿ ಸಿ.ಎನ್. ಪ್ರೀತಂ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

× How can I help you?