ತುಮಕೂರು: ಕುಣಿಗಲ್ ತಾಲೂಕಿನ ಉಜ್ಜಿನಿ ಗ್ರಾಮ ಪಂಚಾಯಿತಿಗೆ 2024ರ ನರೇಗಾ ಹಬ್ಬದಲ್ಲಿ ಉತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ ದಕ್ಕಿದೆ.
೨೦೨೩-೨೪ನೇ ಸಾಲಿನಲ್ಲಿ ೭೫,೦೦೦ ಮಾನವ ದಿನಗಳ ಸೃಜನೆ ಮತ್ತು ಸಮುದಾಯ ಆಸ್ತಿಗಳ ಸೃಜನೆಯಲ್ಲಿ ಮುಂಚೂಣಿಯಲ್ಲಿರುವ ಹಿನ್ನೆಲೆಯಲ್ಲಿ ಉಜ್ಜಿನಿ ಗ್ರಾಮ ಪಂಚಾಯಿತಿಗೆ ಈ ಪ್ರಶಸ್ತಿ ಸಿಕ್ಕಿದೆ ಪ್ರಶಸ್ತಿ ಪತ್ರವನ್ನು ಜಿ,ಪಂ.ಸಿಇಓ ಪ್ರಭು.ಜಿ.ರವರು ವಿಧಾನ ಪರಿಷತ್ ಸಭಾಪತಿ ಬಸವರಾಜಹೊರಟ್ಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆರವರಿಂದ ಸ್ವೀಕರಿಸಿದರು.

ಪಾವಗಡ ಗಂಗಮ್ಮಗೆ ಒಲಿದ ಮೇಟ್ ಪ್ರಶಸ್ತಿ :
ಪಾವಗಡ ತಾಲೂಕಿನ ಸಿಕೆ ಪುರ ಗ್ರಾಮ ಪಂಚಾಯಿತಿಯ ಗಂಗಮ್ಮ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 329 ಕುಟುಂಬಗಳಿಗೆ ಉದ್ಯೋಗ ಕೊಡಿಸಿದ್ದು, ಇದರಲ್ಲಿ 246 ಕುಟುಂಬಗಳು 100 ದಿನಗಳ ನರೇಗಾ ಕೂಲಿಯನ್ನು ಮುಗಿಸುವಲ್ಲಿ ಯಶಸ್ವಿಯಾಗಿವೆ.
ಈ ಕಾರಣದಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಪಡಿಸುವ ನಿಟ್ಟಿನಲ್ಲಿ ಸಾಧನೆ ಮಾಡಿದ ಗಂಗಮ್ಮನವರಿಗೆ ಮೇಟ್(ಕಾಯಕ ಬಂಧು) ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಸ್ವೀಕರಿಸುವ ವೇಳೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ., ಉಪ ಕಾರ್ಯದರ್ಶಿ ಅಭಿವೃದ್ಧಿ ಸಂಜೀವಪ್ಪ ಕೆ.ಪಿ. ಸೇರಿದಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ನರೇಗಾ ತಾಂತ್ರಿಕ ಸಿಬ್ಬಂದಿ ಭಾಗಿಯಾಗಿದ್ದರು.
-ಕೆ.ಬಿ. ಚಂದ್ರಚೂಡ್