ತುಮಕೂರು : ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿಸಲು ಈಗಾಗಲೇ ಜಿಲ್ಲೆಯಲ್ಲಿ 11ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಖರೀದಿ ಕೇಂದ್ರದಲ್ಲಿ ಮಾರ್ಚ್ 3 ರಿಂದ ರಾಗಿಯನ್ನು ರೈತರಿಂದ ಖರೀದಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಜಿಲ್ಲೆಯ ಕುಣಿಗಲ್, ತಿಪಟೂರು, ತುರುವೇಕೆರೆ, ಹುಳಿಯಾರು, ಚಿ.ನಾ.ಹಳ್ಳಿ, ಗುಬ್ಬಿ, ಮಧುಗಿರಿ, ತುಮಕೂರು, ಶಿರಾ, ಕೊರಟಗೆರೆ(ಹೊಸದಾಗಿ ತೆರೆಯಲಾಗಿದೆ) ಯಲ್ಲಿ ತಲಾ 1 ಹಾಗೂ ಕುಣಿಗಲ್‌ನಲ್ಲಿ 2 ಸೇರಿದಂತೆ ಒಟ್ಟು 11 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಖರೀದಿ ಕೇಂದ್ರದಲ್ಲಿ ಈಗಾಗಲೇ ರೈತರ ನೋಂದಣಿ ಕಾರ್ಯ ಪ್ರಾರಂಭಿಸಲಾಗಿದ್ದು, ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.