ವೃತ್ತಿಪರ ತರಬೇತಿಗಾಗಿ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ
ತುಮಕೂರು : IISc, IIT & NIT ಸಂಸ್ಥೆಗಳ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸುಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದ ಮೂಲ ನಿವಾಸಿಯಾಗಿದ್ದು, ರಾಜ್ಯ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯಗಳಲ್ಲಿè BE/B.tech ಕೋರ್ಸುಗಳಲ್ಲಿ ವ್ಯಾಸಂಗ ಮಾಡಿರಬೇಕು ಹಾಗೂ ಕನಿಷ್ಠ ಶೇ.55ರಷ್ಟು ಅಂಕ ಗಳಿಸಿರಬೇಕು. ಈ ಯೋಜನೆಯಡಿ ಶಿಷ್ಯ ವೇತನ ಪಡೆಯಲು ಪದವಿ ಪೂರೈಸಿದ 5 ವರ್ಷದೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ 5 ಲಕ್ಷ ರೂ.ಗಳು ಮೀರಿರಬಾರದು.
ಆಸಕ್ತರು ಏಪ್ರಿಲ್ 11 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-೧, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರ, ತುಮಕೂರು ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ
ತುಮಕೂರು : ಎಸ್‌ಬಿಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉಚಿತ ಊಟ ಹಾಗೂ ವಸತಿಯೊಂದಿಗೆ 10 ದಿನಗಳ ಅಣಬೆ ಬೇಸಾಯ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವಯೋಮಾನದೊಳಗಿನ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಏಪ್ರಿಲ್ ೧೨ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ, ತುಮಕೂರು-572104 ಅಥವಾ ದೂ.ವಾ.ಸಂ.0816-2243386,, ಮೊ.ಸಂ.9738351048/ 9663680001ನ್ನು ಸಂಪರ್ಕಿಸಬೇಕೆAದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಕೆ.ಎನ್. ತಿಳಿಸಿದ್ದಾರೆ.
ರುಡ್‌ಸೆಟ್ ಸಂಸ್ಥೆ : ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ
ತುಮಕೂರು : ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೇ 5 ರಿಂದ ಉಚಿತ ಎಂಬ್ರಾಯ್ಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ತರಬೇತಿ ನೀಡಲು ಜಿಲ್ಲೆಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದೆ.
ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380220884, 9380162042, 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.