ತುಮಕೂರು- ಮಹಿಳಾ-ಸಾಧಕಿಯರನ್ನು-ವಿಶ್ವ-ಮಹಿಳಾ-ದಿನದಂದು- ಸ್ಮರಣೆ-ಮಾಡಬೇಕು-ಹಿರಿಯ-ನ್ಯಾಯವಾದಿ-ಮರಿಚೆನ್ನಮ್ಮ

ತುಮಕೂರು: ಮಹಿಳೆಯರ ಪರವಾಗಿ ಹೋರಾಟ ನಡೆಸಿದ ಮಹಿಳಾ ಸಾಧಕಿಯರನ್ನು ವಿಶ್ವ ಮಹಿಳಾ ದಿನದಂದು ಸ್ಮರಣೆಮಾಡಬೇಕು. ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿ ಉನ್ನತ ಸ್ಥಾನಮಾನ ಗಳಿಸಿದವರು ಇಂದಿನ ಮಹಿಳೆಯರಿಗೆ ಆದರ್ಶವಾಗಬೇಕು. ಆತ್ಮವಿಶ್ವಾಸ, ಆತ್ಮಸ್ಥೈರ್ಯ ರ್ಯ ಬೆಳೆಸಿಕೊಂಡು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಮರ್ಥ್ಯ ಸಾಧಿಸಬಹುದು ಎಂದು ಹಿರಿಯ ನ್ಯಾಯವಾದಿ ಮರಿಚೆನ್ನಮ್ಮ ಹೇಳಿದರು.


ತುಮಕೂರು ಜಿಲ್ಲಾ ಮಹಿಳಾ ವಕೀಲರು ಭಾನುವಾರ ನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕೇಕ್ ಕತ್ತರಿಸಿ, ಸಿಹಿ ವಿತರಿಸಿ ವಿಶೇಷ ಕಾರ್ಯಕ್ರಮ ರೂಪಿಸಿ ಸಂಭ್ರಮಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಅನೇಕ ಮಹಿಳೆಯರು ಮಹಿಳಾ ಶೋಷಣೆ ವಿರುದ್ಧ ಧ್ವನಿ ಮಾಡಿ ಹೋರಾಟ ಮಾಡಿದ್ದಾರೆ.ಕಿತ್ತೂರುರಾಣಿಚೆನ್ನಮ್ಮ, ಅಕ್ಕಮಹಾದೇವಿ, ಸಾವಿತ್ರಿ ಬಾಯಿ ಬಾಪುಲೆ ಮೊದಲಾದವರು ಮಹಿಳೆಯರ ಪರ ಕ್ರಾಂತಿಕಾರಕ ಹೋರಾಟ ಮಾಡಿದರು. ಅವರು ನಮಗೆ ಪ್ರೇರಣೆಯಾಗಬೇಕು.ಉಕ್ಕಿನ ಮಹಿಳೆ ಎಂದು ಹೆಸರಾದ ಇಂದಿರಾಗಾಂಧಿಯವರು ದೇಶದ ಪ್ರಧಾನ ಮಂತ್ರಿಯಾಗಿ ಸಮರ್ಥ ಆಡಳಿತ ನೀಡಿದರು.

ಮಹಿಳೆಯರು ಇಂದು ಗ್ರಾಮ ಪಂಚಾಯ್ತಿ ಸದಸ್ಯೆಯಿಂದ ರಾಷ್ಟ್ರಪತಿವರೆಗಿನ ಸ್ಥಾನಮಾನಗಳನ್ನು ನಿಭಾಯಿಸುವಷ್ಟು ಸದೃಢರಾಗಿ ಬೆಳೆಯುತ್ತಿದ್ದಾರೆ.ಅಂತಹ ಅವಕಾಶಗಳು ನಮಗೆ ಒದಗಿ ಬರುತ್ತಿವೆ. ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಮಹಿಳೆಯರು ಬೆಳೆಯಬೇಕು ಎಂದರು.


ಫ್ರಾನ್ಸ್, ಜರ್ಮನಿ, ರಷ್ಯಾ ಮುಂತಾದ ದೇಶಗಳಲ್ಲಿ ಮಹಿಳಾ ಕಾರ್ಮಿಕರ ಮೇಲೆ ನಡೆಯುತ್ತಿದ್ದ ದೌರ್ಜನ್ಯ, ಶೋಷಣೆ, ಮಾನವಹಕ್ಕುಗಳ ಉಲ್ಲಂಘನೆ ವಿರುದ್ಧ ಆರಂಭವಾದ ಹೋರಾಟ ಮಹಿಳಾ ದಿನ ಆಚರಣೆಗೆ ಕಾರಣವಾಯಿತು. ಇಂದು ಪ್ರಪಂಚದ ಎಲ್ಲಾ ದೇಶಗಳೂ ಮಹಿಳಾ ದಿನ ಆಚರಿಸಿ, ಮಹಿಳೆಯರ ರಕ್ಷಣೆ, ಹಕ್ಕು ಕಾಪಾಡುವ ಪ್ರಯತ್ನ ಮಾಡುತ್ತಿವೆ. ಹೆಣ್ಣಿಗೆ ಯಾವುದೇ ಪ್ರಮುಖ ಸ್ಥಾನಮಾನ, ಧ್ವನಿ ಇರಲಿಲ್ಲ.

ಆಚರಣೆಯಲ್ಲಿದ್ದ ಅನಿಷ್ಟ ಪದ್ಧತಿಗಳಿಂದ ಮಹಿಳೆ ಯಾತನೆ ಅನುಭವಿಸುತ್ತಿದ್ದಳು.ಇಂತಹ ಮಹಿಳೆಯರು ಶೋಷಣೆ ಮುಕ್ತರಾಗಲು ಡಾ.ಅಂಬೇಡ್ಕರ್ ಅವರು ಕಾರಣ.ಸಂವಿಧಾನದಲ್ಲಿ ಮಹಿಳೆಯರಿಗೆ ಸಮಾನ ಹಕ್ಕು, ರಕ್ಷಣೆ, ಸ್ಥಾನಮಾನ ದೊರಕಲು ಅಂಬೇಡ್ಕರ್ ಸಂವಿಧಾನದಿಂದ ಸಾಧ್ಯವಾಗಿದೆ.ಈಗ ಮಹಿಳೆಯರು ತಮ್ಮ ಶಕ್ತಿ ಸಾಮರ್ಥ್ಯ ಬಳಿಸಿಕೊಂಡು ಸಾಧನೆ ಮಾಡಿ ಆದರ್ಶ ಸಂಸಾರ, ಸಮಾಜಕಟ್ಟಲು ಮುಂದಾಗಬೇಕು ಎಂದು ಮರಿಚೆನ್ನಮ್ಮ ಮನವಿ ಮಾಡಿದರು.


ವಕೀಲರಾದ ಮಂಜುಳಾ, ವಿಜಯ, ಪೂರ್ಣಿಮಾ, ಅನಿತಾಅಜಯ್, ನೇತ್ರಾವತಿ, ಭವ್ಯಶಾನುಭೋಗ್, ಬೇಬಿ, ದೀಪಾ, ಮಂಜುಳಾ, ಪ್ರಿಯದರ್ಶಿನಿ, ಸುಧಾ, ಮೋಹನ್‌ಕುಮಾರಿ, ಸೇವಪ್ರಿಯಾ, ಜಯಂತಿ,ಶ್ವೇತಾ,ಪೂರ್ಣಿಮಾ,ಸುಧಾ ಮತ್ತಿತರರು ಭಾಗವಹಿಸಿದ್ದರು.

  • ಕೆ.ಬಿ.ಚಂದ್ರಚೂಡ

Leave a Reply

Your email address will not be published. Required fields are marked *

× How can I help you?