ತುಮಕೂರು:ಪ್ರೌಢಶಾಲೆಯಲ್ಲಿನ ಮಕ್ಕಳಿಗೆ ಪೋಕ್ಸೊ ಕಾಯಿದೆ ಕುರಿತು ಜಾಗೃತಿ ಮೂಡಿಸುವ ಕೆಲಸ ಮಹತ್ವದ್ದಾಗಿದೆ-ಡಾ. ಕೆ.ಬಿ.ಲಿಂಗೇಗೌಡ

ತುಮಕೂರು:ಪ್ರೌಢಶಾಲೆಯಲ್ಲಿನ ಮಕ್ಕಳಿಗೆ ಪೋಕ್ಸೊ ಕಾಯಿದೆ ಕುರಿತು ಜಾಗೃತಿ ಮೂಡಿಸುವ ಕೆಲಸ ಮಹತ್ವದ್ದಾಗಿದೆ ಎಂದು ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್ (ಸಾಹೇ)ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅಭಿಪ್ರಾಯಪಟ್ಟರು.

ನಗರದ ಸದಾಶಿವನಗರದಲ್ಲಿನ ಬೈರೇಶ್ವರ ಪ್ರೌಢಶಾಲೆಯಲ್ಲಿ ಅಹಿಂಸಾ ಇಂಟರ್‌ನ್ಯಾಶನಲ್‌ನ ಅಸೋಸಿಯೇಷನ್ ಮತ್ತು ಇಂಡಿಯಾ ಚಾರಿಟೇಬಲ್ ಟ್ರಸ್ಟ್ ಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಕ್ಸೊ ಕಾಯಿದೆ ಜಾಗೃತಿ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರ ಮದಲ್ಲಿ ಭಾಗವಹಿಸಿ ಅವರು ಮಾತನಾಡಿ ಶಾಲಾ ಮಕ್ಕಳಿಗೆ ಸಾಮಾಜಿಕ ತಿಳಿವಳಿಕೆಯ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ನೂರುನ್ನೀಸಾ ಮೇಂ, ಡಾ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನ ಸಹ ಸಂಸ್ಥಾಪಕ ಅಧ್ಯಕ್ಷ ಡಾ ಮೊಹಮ್ಮದ್ ಹುಸೇನ್ ಶರೀಫ್, ಭಾರತ ಸರ್ಕಾರ ಜಿಎಸ್‌ಟಿ ಮತ್ತು ಕಸ್ಟಮ್ಸ್ ನ ನಿವೃತ್ತ ಆಯುಕ್ತರಾದ ಹರ್ಷ ವರ್ಧನ್ ಉಮ್ರೆ ಮತ್ತಿತರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಬೈರೇಶ್ವರ ಪ್ರೌಢಶಾಲೆಯ ೧೦೪ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.

Leave a Reply

Your email address will not be published. Required fields are marked *

× How can I help you?