ದೇಶದ ಶ್ರೇಷ್ಠ ವಿಜ್ಞಾನಿ, ಪದ್ಮವಿಭೂಷಣ ಪುರಸ್ಕೃತರು ಹಾಗೂ ಇಸ್ರೋದ ಮಾಜಿ ಅಧ್ಯಕ್ಷರಾಗಿ ಅಪ್ರತಿಮ ಸೇವೆ ಸಲ್ಲಿಸಿರುವ ಡಾ. ಕೃಷ್ಣಸ್ವಾಮಿ ಕಸ್ತೂರಿ ರಂಗನ್ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಮನಸ್ಸು ಭಾರವಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ ಸೋಮಣ್ಣನವರು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.
ಅನೇಕ ರಾಕೆಟ್ ಗಳ ಉಡಾವಣೆ, ಭಾರತದಲ್ಲಿ ವಿಜ್ಞಾನ-ತಂತ್ರಜ್ಞಾನದ ಅಭಿವೃದ್ಧಿ ಹಾಗೂ ಇಸ್ರೋದ ಬೆಳವಣಿಗೆಯಲ್ಲಿ ಇವರ ಕೊಡುಗೆ ಅತ್ಯಮೂಲ್ಯವಾದುದು. ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಇವರು ನೀಡಿದ್ದ ವರದಿ ಇಂದಿಗೂ ಪ್ರಸ್ತುತ.
ಶ್ರೀಯುತರ ಆತ್ಮಕ್ಕೆ ಸದ್ಗತಿ ದೊರಕಲಿ, ಕುಟುಂಬಸ್ಥರು, ಆಪ್ತರು ಹಾಗೂ ಅಪಾರ ಅಭಿಮಾನಿಗಳು, ಶಿಷ್ಯವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
#DrKasturirangan #ISRO