ತುಮಕೂರು- ಬೆಳಗಾವಿ-ಬಸ್-ಸಿಬ್ಬಂದಿ-ಮೇಲಿನ-ಹಲ್ಲೆಗೆ-ವಿವಿಧ- ಸಂಘಟನೆಗಳ-ಖಂಡನೆ

ತುಮಕೂರು: ಬೆಳಗಾವಿಯ ಬಾಳೆಕುಂದ್ರಿಯಲ್ಲಿ ಕೆಎಸ್‌ಆರ್‌ಟಿಸಿಯ ಚಾಲಕ, ನಿರ್ವಾಹಕರ ಮೇಲೆ ಪುಂಡರು ನಡೆಸಿದ ಹಲ್ಲೆಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯರಸ್ತೆ ಸಾರಿಗೆ ನಿಗಮದ ತುಮಕೂರು ವಿಭಾಗದ ನಿವೃತ್ತ ನೌಕರರು ವಿವಿಧ ಸಂಘಟನೆಗಳ ಬೆಂಬಲದೊAದಿಗೆ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.


ದೇವರಾಜ ಅರಸು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಪಾದಯಾತ್ರೆಯಲ್ಲಿ ಸಾಗಿ ಜಿಲ್ಲಾಧಿಕಾರಿಕಚೇರಿ ಬಳಿ ಪ್ರತಿಭಟನೆ ನಡೆಸಿದರು.ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.


ಸಾರಿಗೆ ಸಂಸ್ಥೆಯ ನಿವೃತ್ತ ನೌಕರರ ಹೋರಾಟ ಬೆಂಬಲಿಸಿ ಮಾತನಾಡಿದಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್, ಬೆಳಗಾವಿಯಲ್ಲಿ ಎಂಇಎಸ್‌ನವರು ಪದೇಪದೆ ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದಾರೆ, ನಮ್ಮ ಸಾರಿಗೆ ಸಂಸ್ಥೆ ಬಸ್ ಹಾಗೂ ಬಸ್ ಸಿಬ್ಬಂದಿ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ.ಇವರ ಉಪಟಳಕ್ಕೆ ಕಡಿವಾಣ ಹಾಕುವಲ್ಲಿ ಸರ್ಕಾರ ವಿಫಲವಾಗಿದೆ.ಬೆಳಗಾವಿ ರಾಜಕಾರಣಿಗಳು ವೋಟಿಗಾಗಿ ಮರಾಠಿಗರನ್ನು ಓಲೈಕೆ ಮಾಡಿಕೊಂಡು ಕನ್ನಡ ಭಾಷೆ, ಕನ್ನಡಿಗರ ಹಿತಕಡೆಗಣಿಸುತ್ತಿದ್ದಾರೆ ಎಂದು ಟೀಕಿಸಿದರು.


ಕನ್ನಡಿಗರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡುತ್ತಿರುವಎಂಇಎಸ್ ಪುಂಡರ ವಿರುದ್ಧ ಸರ್ಕಾರ ಮೃದುಧೋರಣೆ ತಳೆಯದೆ ಕಠಿಣಕ್ರಮ ತೆಗೆದುಕೊಳ್ಳಬೇಕು.ಬೆಳಗಾವಿ ರಾಜಕಾರಣಿಗಳು ಎಂಇಎಸ್‌ನ ಕಾರ್ಯಕರ್ತರಿಗೆ ತಿಳುವಳಿಕೆ ಹೇಳಬೇಕು ಇಲ್ಲವೇ ಸರ್ಕಾರ ಎಂಇಎಸ್ ಸಂಘಟನೆಯನ್ನು ನಿಷೇಧಿಸಿಬೇಕು.ರಾಜ್ಯದಗಡಿ ಭಾಗದಲ್ಲಿ ಕನ್ನಡಿಗರಿಗೆ ರಕ್ಷಣೆ ನೀಡಬೇಕು, ಅಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಸರ್ಕಾರಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.


ಕನ್ನಡ ಚಲನಚಿತ್ರ ನಟರು ಕನ್ನಡಿಗರ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿ ಬೀದಿಗಿಳಿದು ಹೋರಾಟ ಮಾಡಬೇಕು.ಈ ತಿಂಗಳ ೨೨ರಂದು ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಚಿತ್ರರಂಗದವರು, ರಾಜ್ಯದ ಎಲ್ಲಾ ಸಂಘಟನೆಗಳೂ ಬೆಂಬಲ ನೀಡಿ ಕನ್ನಡಿಗರ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಧನಿಯಾಕುಮಾರ್ ಮನವಿ ಮಾಡಿದರು.


ಪ್ರತಿಭಟನೆಯಲ್ಲಿ ವೆಂಕಟನಾರಾಯಣ, ಭೀಮಾ ನಾಯಕ್, ಜವರುಲ್ಲಾ, ಕೆ.ಎಸ್.ರಾಜಣ್ಣ, ಉಮೇಶ್‌ಕುಮಾರ್, ಜಾಕೋಬ್‌ರಾವ್, ನಾಗರಾಜು, ಪಿ.ಎನ್.ರಾಮಯ್ಯ, ಬಸವರಾಜು, ಅಧ್ಯಕ್ಷಕನ್ನಡ ಪ್ರಕಾಶ್, ಅರುಣ್‌ಕುಮಾರ್, ಮೀಸೆ ಸತೀಶ್, ಕೊಪ್ಪಳ್ ನಾಗರಾಜು, ಹಿರಿಯ ಸಮಾಜಸೇವಕರಾದ ಶಬ್ಬೀರ್ ಅಹ್ಮದ್ ಮೊದಲಾದವರು ಭಾಗವಹಿಸಿದ್ದರು.

  • ಕೆ.ಬಿ.ಚಂದ್ರಚೂಡ

Leave a Reply

Your email address will not be published. Required fields are marked *

× How can I help you?