ಅರಕಲಗೂಡು – ತಾಲೂಕು ಕಸಬಾ ವಲಯದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ, ಶ್ರೀ ಕನ್ನಿಕ ಪರಮೇಶ್ವರಿ ದೇವಸ್ಥಾನದಲ್ಲಿ, ರುದ್ರಾಭಿಷೇಕ ಪೂಜೆ ಸಲ್ಲಿಸಲಾಯಿತು.
ಗ್ರಾಮ ಸುಭೀಕ್ಷಾ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮವನ್ನು ವಕೀಲ ಜನಾರ್ಧನ್ ಗುಪ್ತರವರು ದೀಪ ಬೆಳೆಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮಾಡುವಂತಹ ಜನಪರ ಕಾರ್ಯಕ್ರಮಗಳನ್ನು ಗ್ರಾಮ ಅಭಿವೃದ್ಧಿ ಯೋಜನೆಯ ಮುಖಾಂತರ ಜನಸಾಮಾನ್ಯರಿಗೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ತಾಲೂಕಿನ ಯೋಜನಾಧಿಕಾರಿ ಜಿನ್ನಪ್ಪ ಎಸ್ ಬಿ ರವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮಮಟ್ಟದಲ್ಲಿ ಮಾಡುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸದಸ್ಯ ಹಾಗೂ ಪುರಸಭಾ ಸದಸ್ಯ ವಾಟಲ್ ರಮೇಶ್ ಮಾತನಾಡಿ, ನಮ್ಮಲ್ಲಿ ಹಿಂದೂ ಸಂಸ್ಕೃತಿ ಉಳಿಯಬೇಕಾದರೆ, ಇಂತಹ ಧಾರ್ಮಿಕ ಕಾರ್ಯಕ್ರಮಗಳಿಂದ ಮಾತ್ರ ಸಾಧ್ಯ. ತಮಗೆ ಎಷ್ಟೇ ಒತ್ತಡಗಳಿದ್ದರೂ ಕೂಡ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಸಂಘಟನೆಗಳನ್ನು ಗಟ್ಟಿ ಮಾಡಬಹುದೆಂದು ತಿಳಿಸಿದರು.
ಈ ವೇಳೆ ಅರಕಲಗೂಡು ತಾಲೂಕಿನ ಹಿಂದೂ ರುದ್ರ ಭೂಮಿಯ ಸಿಲಿಕಾನ್ ಚೇಂಬರ್ ಅಳವಡಿಕೆಗೆ ರೂ. 151000/ಮಂಜೂರಾತಿ ಪತ್ರ, ಸೋಮನಹಳ್ಳಿಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದರಕ್ಕಾಗಿ ರೂ. 150000/ ಮಂಜೂರಾತಿ ಪತ್ರ, ಹಾಗೂ ನೈಗೆರೆ ಕಾರ್ಯಕ್ಷೇತ್ರದ ರೂಪ ಅವರ ಮನೆ ದುರಸ್ತಿಗಾಗಿ ಕ್ಷೇತ್ರದಿಂದ ಮಂಜೂರು ಮಾಡಿದ ಡಿಡಿ ಯನ್ನು ಗಣ್ಯರ ಸಮ್ಮುಖದಲ್ಲಿ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎ ಜಿ ರಾಮನಾಥ್ ರವರು ವಹಿಸಿದ್ದರು. ರಾಷ್ಟ್ರೀಯ ಸ್ವಯಂಸೇವಾ ಸಂಘದ ಹಿರಿಯ ಮುಖಂಡ ಹೀರಣಯ್ಯ,ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಪಿ ಎನ್ ರಂಗನಾಥ, ಕನ್ನಿಕ ಮಹಲ್ ಸಮಿತಿ ಅಧ್ಯಕ್ಷ ವೆಂಕಟೇಶ್ ಶೆಟ್ಟಿ, ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ಶಾಂತ ಮಲ್ಲಪ್ಪ, ದೇವಸ್ಥಾನ ಆಡಳಿತ ಮಂಡಳಿ ಖಜಾಂಚಿ ವಾಸವಾಂಭ.ಜಿ.ಗುಪ್ತ, ಮಧ್ಯವರ್ಜನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ್, ತಾಲೂಕಿನ ಜ್ಞಾನವಿಕಾಸ ಸಮನ್ವಾಧಿಕಾರಿ ಸ್ವಪ್ನ, 10 ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು, ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
- ಶಶಿಕುಮಾರ್