ಆಲೂರು-ಸದಸ್ಯತ್ವ ಅಭಿಯಾನವನ್ನು ಬಾ.ಜ.ಪಾ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು-ಶಾಸಕ ಸಿಮೆಂಟ್ ಮಂಜು ಮನವಿ

ಆಲೂರು;ಸದಸ್ಯತ್ವ ಅಭಿಯಾನವನ್ನು ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು ಪ್ರತಿ ಕಾರ್ಯಕರ್ತರು ತಮ್ಮ ಬೂತ್‍ಗಳಲ್ಲಿ ಸಾಧ್ಯವಾದಷ್ಟು ಹೆಚ್ಚು ಸದಸ್ಯರನ್ನು ಸೇರ್ಪಡೆ ಮಾಡಲು ಪ್ರಯತ್ನಿಸಬೇಕು ಎಂದು ಆಲೂರು ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಕಾರ್ಯಕರ್ತರಿಗೆ ಮನವಿ ಮಾಡಿದರು.

ಅವರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳು,ನಾನು ಶಾಸಕನಾದ ನಂತರ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳು ಸಾಮಾಜಿಕ ಸೇವೆಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡಬೇಕು,ಪಕ್ಷವು ಮಾಡುತ್ತಿರುವ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಿ ಪಕ್ಷದ ಸದಸ್ಯರನ್ನಾಗಿ ಮಾಡಿಕೊಳ್ಳಬೇಕು ಎಂದು ಸಲಹೆಗಳನ್ನು ನೀಡಿ ಕ್ಷೇತ್ರದ ಕಾರ್ಯಕರ್ತರು ನಿಗದಿತ ಗುರಿಗಿಂತ ಹೆಚ್ಚಿನ ಸದಸ್ಯರನ್ನು ಸೇರ್ಪಡೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

.ಭಾರತೀಯ ಜನತಾ ಪಕ್ಷವು ವಿಶ್ವದಲ್ಲೇ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಪಕ್ಷದಲ್ಲಿ ಸುಮಾರು 18 ಕೋಟಿ ಸದಸ್ಯರನ್ನು ಹೊಂದಿದ್ದು, ಆ ಅಭಿಯಾನದ ಮುಖಾಂತರ ದೇಶಾದ್ಯಂತ 30 ಕೋಟಿ ಸದಸ್ಯರನ್ನು ಸೇರ್ಪಡೆ ಮಾಡುವ ಗುರಿ ಹೊಂದಲಾಗಿದೆ.ದೇಶದ ಪ್ರಧಾನಮಂತ್ರಿಯವರನ್ನು ಒಳಗೊಂಡು ಪಕ್ಷದ ಪ್ರತಿಯೊಬ್ಬರೂ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.ಪಕ್ಷ ನನಗೆ ತಾಯಿಯಿದ್ದಂತೆ ತಾಯಿಗೆ ಯಾವತ್ತೂ ಮೋಸ ಮಾಡುವ ಕೆಲಸ ಮಾಡಿಲ್ಲ ಮುಂದೆಯೂ ಮಾಡುವುದಿಲ್ಲ. ಪಕ್ಷಕ್ಕೆ ಕಾರ್ಯಕರ್ತರೇ ಬೆನ್ನೆಲುಬು ಬಿಜೆಪಿ ಸದಾ ಕಾರ್ಯಕರ್ತರ ಹಿತ ಬಯಸುವ ಪಕ್ಷವಾಗಿದೆ. ನನಗೆ ಕಾರ್ಯಕರ್ತರೇ ಶಕ್ತಿ ಅವರ ಪ್ರೀತಿ,ಆಶೀರ್ವಾದದಿಂದಾಗಿ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ.ಹಾಗಾಗಿ ಪಕ್ಷದ ಕಾರ್ಯಕರ್ತರನ್ನು ಕುಟುಂಬದ ಸದಸ್ಯರಂತೆ ಕಾಣುತ್ತೇನೆ ಯಾವತ್ತೂ ಅವರಿಗೆ ಕೆಡುಕು ಬಯಸುವುದಿಲ್ಲ, ರಾಜಕೀಯವಾಗಿ ಕಾಂಗ್ರೆಸ್ ಪಕ್ಷ ನಮಗೆ ಎದುರಾಳಿಯಾಗಿದ್ದು ಕಾಂಗ್ರೆಸ್ ಪಕ್ಷ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೂ ಅನ್ಯಾಯ ಮಾಡಿದೆ ಅಂತಹ ಪಕ್ಷದ ಜೊತೆ ನಮ್ಮ ಪಕ್ಷದ ಕಾರ್ಯಕರ್ತರು ಗುರುತಿಸಿಕೊಳ್ಳುವುದರಿಂದ ಪಕ್ಷ ಮುಜುಗರ ಪಡುವಂತಾಗುತ್ತದೆ. ಆದ್ದರಿಂದ ಕಾರ್ಯಕರ್ತರು ಎಚ್ಚರಿಕೆಯಿಂದ ಇರಬೇಕು ಪಕ್ಷದ ಕಾರ್ಯಕರ್ತರು ಎಲ್ಲಾ ಗೊಂದಲವನ್ನು ಬದುಗಿಟ್ಟು ಪಕ್ಷದ ಏಳಿಗೆಗೆ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.

ಆಲೂರು-ಕಟ್ಟಾಯ ಮಂಡಲದ ಬಿಜೆಪಿ ಅಧ್ಯಕ್ಷ ಉಮಾ ರವಿಪ್ರಕಾಶ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷವು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.ಅವರು ಮಾಡಿರುವ ಉತ್ತಮ ಕೆಲಸಗಳು ಪಕ್ಷಕ್ಕೆ ಹೆಚ್ಚಿನ ಬಲ ನೀಡಿವೆ. ಶಾಸಕ ಸಿಮೆಂಟ್ ಮಂಜು ಅವರಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗುತ್ತಿವೆ ಪಕ್ಷವು ಕೂಡ ಸಾಕಷ್ಟು ಬಲವೃದ್ಧಿಯಾಗಿದೆ.ಪಕ್ಷದ ಕೆಲವು ಮುಖಂಡರು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಹಾಗೂ ಮುಖಂಡರ ಜೊತೆ ಗುರುತಿಸಿಕೊಂಡು ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುವ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ.ಇದರಿಂದ ಪಕ್ಷಕ್ಕೆ ಮುಜುಗರವಾಗುತ್ತಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿಕೊಡುವ ಮೂಲಕ ಕಾರ್ಯಕರ್ತರು ಯಾವುದೇ ಗೊಂದಲಗಳಿಗೆ ಎಡೆ ಮಾಡದೇ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ,ಜಿಲ್ಲಾ ಕಾರ್ಯದರ್ಶಿ ಪೂವಯ್ಯ,ಜಿಲ್ಲಾ ಬಿಜೆಪಿ ಸಂಚಾಲಕ ರಾಜಕುಮಾರ್, ಮಾಜಿ ಅಧ್ಯಕ್ಷ ಕಾಂತರಾಜ್,ಎ.ಹೆಚ್. ಪ್ರಧಾನ ಕಾರ್ಯದರ್ಶಿ ರುದ್ರೇಗೌಡ, ಪ್ರದಾನ ಕಾರ್ಯದರ್ಶಿ ಕೃಷ್ಣ ಅಬ್ಬನ,ರಮೇಶ್,ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷ ಸವಿತಾ,ತಾಲ್ಲೂಕು ಉಪಾಧ್ಯಕ್ಷ ಬಸರಾಜ್, ತಾಲೂಕ್ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಅಬ್ಬನ,ಲೋಕೇಶ್ ಕಣಗಾಲ್,ಅಜಿತ್ ಚಿಕ್ಕಣಗಾಲ್,ನಂಜುಂಡಪ್ಪ,ಲೋಹಿತ್,ರುದ್ರೇಗೌಡ,ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

——————ಧರ್ಶನ್ ಕೆರೆಹಳ್ಳಿ

Leave a Reply

Your email address will not be published. Required fields are marked *

× How can I help you?