ಕೆ.ಆರ್.ಪೇಟೆ-ಮಾರೇನಹಳ್ಳಿ ಗ್ರಾಮಕ್ಕೆ ಶಾಸಕ ಹೆಚ್.ಟಿ ಮಂಜು ಭೇಟಿ-ಮೃತರ ಕುಟುಂಬಸ್ಥರಿಗೆ ಸಾಂತ್ವಾನ-ಅಗತ್ಯ ಕ್ರಮಕ್ಕೆ ಸೂಚನೆ

ಕೆ.ಆರ್.ಪೇಟೆ:ಕಲುಷಿತ ನೀರು ಸೇವಿಸಿ ತೀವ್ರ ವಾಂತಿ ಭೇದಿಯಿಂದ ಇಬ್ಬರು ವಯೋವೃದ್ದರು ಮೃತಪಟ್ಟಿದ್ದ
ಸಂತೆಬಾಚಹಳ್ಳಿ ಹೋಬಳಿಯ ಭಾರತಿಪುರ ಕ್ರಾಸ್ ವ್ಯಾಪ್ತಿಗೆ ಬರುವ ಮಾರೇನಹಳ್ಳಿ ಗ್ರಾಮಕ್ಕೆ ಶಾಸಕ ಹೆಚ್.ಟಿ ಮಂಜು ಭೇಟಿ ನೀಡಿ ಸೂಕ್ತ ಚಿಕಿತ್ಸೆ ಹಾಗು ಸ್ವಚ್ಛತೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಸನ, ಚನ್ನರಾಯಪಟ್ಟಣ, ಶ್ರವಣಬೆಳಗೊಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮರಳಿ ಗ್ರಾಮಕ್ಕೆ ಆಗಮಿಸಿ ವಿಶ್ರಾಂತಿ ಪಡೆಯುತ್ತಿರುವವರ ನಿವಾಸಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.ಬಳಿಕ ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ಕಳೆದ ಮೂರು ನಾಲ್ಕು ದಿನಗಳಿಂದ ಗ್ರಾಮದಲ್ಲಿ ಬೀಡು ಬಿಟ್ಟಿರುವ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎ.ಎನ್ ಜಾನಕಿರಾಮ್,ಸಂತೇಬಾಚಳ್ಳಿ ಹೋಬಳಿಯ ಅಧ್ಯಕ್ಷ ರವಿಕುಮಾರ್,ತಾಲೂಕು ಆರೋಗ್ಯ ಅಧಿಕಾರಿ ಡಾ: ಅಜಿತ್,ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಶ್ಮಿ,ಸಹಾಯಕ ಇಂಜಿನಿಯರ್ ಪ್ರವೀಣ್,ಪಿಡಿಓ ದಿನೇಶ್, ಭಾರತೀಪುರ ಕ್ರಾಸ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಬೇರ,ಗ್ರಾ.ಪಂ.ಸದಸ್ಯರಾದ ಕೆಂಪರಾಜು, ನಾಗೇಶ್, ಕುಮಾರ್, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್,ಲಕ್ಷ್ಮಮ್ಮ, ಆರೋಗ್ಯ ಇಲಾಖೆಯ ಶಿವಸ್ವಾಮಿ, ಧರ್ಮೇಂದ್ರ, ನವೀನ್, ರೇಖಾ, ಲೀಲಾವತಿ, ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

————–ಮನು ಮಾಕವಳ್ಳಿ ಕೆ ಆರ್ ಪೇಟೆ

Leave a Reply

Your email address will not be published. Required fields are marked *

× How can I help you?