ಕೆ.ಆರ್.ಪೇಟೆ:ರಾಜ್ಯದ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಶ್ರಮದಾನದ ಮೂಲಕ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಶ್ರೀ ಧರ್ಮಸ್ಥಳ ಸಂಘದ ಮೇಲ್ವಿಚಾರಕಿ ಗುಣಶ್ರೀ ತಿಳಿಸಿದರು.
ಅವರು ತಾಲ್ಲೂಕಿನ ಬೂಕನಕೆರೆ ಹೋಬಳಿಯ ಯಗಚಗುಪ್ಪೆ ಗ್ರಾಮದಲ್ಲಿರುವ ಶ್ರೀ ದೊಡ್ಡಮ್ಮತಾಯಿ ದೇವಾಲಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ್ದ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಧಾರ್ಮಿಕ ಕೇಂದ್ರಗಳು ಸ್ವಚ್ಛತೆ ಇದ್ದಲ್ಲಿ ಭಯ-ಭಕ್ತಿ ಮೂಡಲು ಸಾಧ್ಯ.ಯೋಜನೆ ವತಿಯಿಂದ ಈ ವರ್ಷ ರಾಜ್ಯವ್ಯಾಪ್ತಿಯ ದೇವಾಲಯ,ಆವರಣಗಳನ್ನು ಸ್ವಚ್ಛ ಮಾಡುವ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರ ಆದೇಶದಂತೆ ಹಮ್ಮಿಕೊಳ್ಳಲಾಗಿದೆ.ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಹೇಳಿದರು.
ಸ್ವಚ್ಛತೆ ಎಂಬುದು ಪ್ರತಿಯೊಬ್ಬರ ಮನೆಯಿಂದ ಪ್ರಾರಂಭ ವಾಗಬೇಕು.ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಂಡಿರುವ ಸ್ವಚ್ಛತಾ ಕಾರ್ಯ ನಿರಂತರವಾಗಿ ನಡೆಯಲಿ,ಸ್ವಚ್ಛತೆ ಎಂಬುದು ಸಂಸ್ಕøತಿಯ ಪ್ರತೀಕವಾಗಿದೆ.ರಾಜ್ಯದ ಎಲ್ಲಾ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಅಂತರಂಗ (ಕೇಂದ್ರ ಒಳಗೆ) ಮತ್ತು ಬಹಿರಂಗ (ಕೇಂದ್ರ ಪರಿಸರ) ಸ್ವಚ್ಛತೆಯನ್ನು ಮಾಡಿ ಪಾವಿತ್ರ್ಯತೆಯನ್ನು ಕಾಪಾಡಲು ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ನೇತೃತ್ವದಲ್ಲಿ ಯೋಜನೆಯೊಂದನ್ನು ರೂಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಗಳಾದ ನಾಗರತ್ನ,ಮಹಾದೇವಮ್ಮ,ನೀಲಮ್ಮ ಸ್ವಾಮಿ, ರಾಮಚಂದ್ರ, ಪುಟ್ಟರಾಜು ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ- ಮನು ಮಾಕವಳ್ಳಿ ಕೆ ಆರ್ ಪೇಟೆ